ನಿಮಗೆ ತಂದೆ-ತಾಯಿ ಎರಡೂ ಆಗಬಲ್ಲವನೇ ಗುರು
ದೇಶಕ್ಕೆ ಉತ್ತಮ ನಾಗರಿಕರನ್ನು ರೂಪಿಸಿಕೊಡುವಲ್ಲಿ ಗುರುವಿನ ಪಾತ್ರ ಮಹತ್ವ ಅನನ್ಯವಾಗಿದೆ. ನಮ್ಮಲ್ಲಿರುವ ಅಜ್ಞಾನದಿಂದ ಹೊರಗೆ ಹಾಕಲು ಶಿಕ್ಷಕರು ಮಾರ್ಗದರ್ಶಿಯಾಗುತ್ತಾರೆ. ಗುರು ಎಂಬ ಶಬ್ದದ ಅರ್ಥವೂ ಇದನ್ನೇ ಹೇಳುತ್ತದೆ. ಅಂಧಃಕಾರವನ್ನು ದೂರಾಗಿಸುವವನು ಎಂದು.
ಪ್ರತಿಯೊಬ್ಬರ ಜೀವನದ ಏಳು-ಬೀಳಿಗೆ ಗುರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಕಾರಣನಾಗುತ್ತಾನೆ. ಏಕೆಂದರೆ ಒಬ್ಬ ಶಿಕ್ಷಕನು ನಮ್ಮಲ್ಲಿರುವ ಪ್ರಜ್ಞೆಯನ್ನು ಜಾಗೃತಗೊಳಿಸುವ ಶಕ್ತಿಯಾಗಿರುತ್ತಾನೆ. ಶಿಕ್ಷಕರ ದಿನಾಚರಣೆ ನಿಮಿತ್ತ ‘ನಮ್ಮ ಬದುಕಿನಲ್ಲಿ ಶಿಕ್ಷಕರ ಮಹತ್ವ’ ಎಂಬ ವಿಷಯದ ಮೇಲೆ ಈ ಲೇಖನ ಕೇಂದ್ರಿಕೃತವಾಗಿದೆ