ಒಬ್ಬ ವ್ಯಕ್ತಿ ಮೇಲೆ ಕೊರೊನಾವೈರಸ್ ಎರಡು ಬಾರಿ ದಾಳಿ ನಡೆಸುವ ಸಾಧ್ಯತೆಯಿದೆಯೇ? ಹಾಗಾದರೇ ಅಂಥ ವ್ಯಕ್ತಿಯ ರೋಗ ನಿರೋಧಕ ಶಕ್ತಿಯ ಮೇಲೆ ಏನು ಪರಿಣಾಮ ಬೀರಲಿದೆ ಎಂಬುದು ಇನ್ನೂ ಪ್ರಶ್ನೆಯಾಗೇ ಉಳಿದಿದೆ. ಸಾರ್ವಜನಿಕರು ತಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಮೂಲಕ ಸಾಮಾನ್ಯ ಶೀತ, ಕೆಮ್ಮು, ಜ್ವರದಿಂದ ಮುಕ್ತಿ ಹೊಂದಬಹುದು. ಆದರೆ ಕೊರೊನಾದಿಂದ ಮುಕ್ತಿ ಹೊಂದಲು ಸಾಧ್ಯವೇ? ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದೆ.
ಸಾಮಾನ್ಯ ಶೀತಕ್ಕೆ ಕಾರಣವಾಗುವ ವೈರಸ್ ರೋಗಿಯ ದೇಹ ಹೊಕ್ಕಿದ ಒಂದು ವಾರದಲ್ಲೇ ತಾನೆ ತಾನಾಗಿ ನಾಶವಾಗುತ್ತದೆ. ಅಥವಾ ತೆಗೆದುಕೊಳ್ಳುವ ಚಿಕಿತ್ಸೆ, ಆಹಾರ ಕ್ರಮದ ಮೇಲೆ ಶೀತ ಯಾವಾಗ ಕಡಿಮೆಯಾಗುತ್ತದೆ ಎಂಬುದು ನಿರ್ಧಾರವಾಗಲಿದೆ. ಆದರೆ, ಸಾರ್ಸ್ ಮಾದರಿ ಕೊರೊನಾವೈರಸ್ ನಿಂದ ಹರಡುವ ಕೊವಿಡ್ 19 ರೋಗದ ವೈರಸ್ ತಾನಾಗೇ ಸಾಯುವುದಿಲ್ಲ.
ಸದ್ಯಕ್ಕಂತೂ ಕೊವಿಡ್19 ರೋಗಿಗಳ ಇತಿಹಾಸದ ಆಧಾರದ ಮೇಲೆ ಸಂಶೋಧನೆ ನಡೆಸಲಾಗಿದ್ದು, ಒಮ್ಮೆ ವೈರಸ್ ಸೋಂಕಿಗೆ ಒಳಗಾದ ವ್ಯಕ್ತಿಗೆ ಮತ್ತೊಮ್ಮೆ ಸೋಂಕು ತಗುಲುವುದು ಸಾಧ್ಯವಿಲ್ಲ, ವೈರಸ್ ವಿರುದ್ಧ ಪ್ರತಿರೋಧಕ ಶಕ್ತಿ ಹೆಚ್ಚಾಗಿರುತ್ತದೆ.
Read more at: https://kannada.oneindia.com/news/international/can-you-get-the-coronavirus-twice-what-that-means-for-immunity-188748.html