ಕೊರೊನಾ ವೈರಸ್‌ಗೆ ಚಿಕಿತ್ಸೆ ಇನ್ನೂ ಕಂಡುಹಿಡಿಯಲಾಗಿಲ್ಲ. ಆದರೆ ರೋಗ ಹರಡದಂತೆ ಕೊಂಚ ಮಟ್ಟಿಗೆ ತಡೆಗಟ್ಟಬಹುದಾಗಿದೆ. ಕೈಕಾಲುಗಳನ್ನು ಸೋಪು, ನೀರಿನಿಂದ ಕೈತೊಳೆದುಕೊಳ್ಳಬೇಕು. ಕಣ್ಣು, ಮೂಗು, ಬಾಯಿಯನ್ನು ಕೈನಿಂದ ಮುಟ್ಟಿಕೊಳ್ಳುವುದನ್ನು ಕಡಿಮೆ ಮಾಡಬೇಕು.
ವೈರಸ್ ಹರಡದಂತೆ ತಡೆಯಲು ಕೈ ತೊಳೆಯುವುದು ಉತ್ತಮ ವಿಧಾನ ಎಂದು ಎಲ್ಲರೂ ಹೇಳುತ್ತಿದ್ದಾರೆ. ಆದರೆ ಕೈ ತೊಳೆಯುವುದು ಹೇಗೆ? ಯಾವ ಸೋಪು, ಹ್ಯಾಂಡ್ ವಾಶ್ ಬಳಸಬೇಕು? ಎಷ್ಟು ಸಮಯ ಕೈ ತೊಳೆಯಬೇಕು? ಎಂಬ ಪ್ರಶ್ನೆ ಸಹಜವಾಗಿ ಎಲ್ಲರಲ್ಲೂ ಮೂಡುತ್ತದೆ. ಇದನ್ನು ಸರಳವಾಗಿ ಈ ವಿಡಿಯೋದಲ್ಲಿ ಡಾ. ಸುಶಿ ವಿವರಿಸಿದ್ದಾರೆ.
ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು. ಮೊದಲು ಶೀತ ಕಾಣಿಸಿಕೊಳ್ಳುತ್ತದೆ ಕ್ರಮೇಣವಾಗಿ ತಲೆನೋವು ಕಾಣಿಸಿಕೊಂಡು ಇಡೀ ದೇಹವನ್ನು ಆವರಿಸುತ್ತದೆ.
Read more at: https://kannada.oneindia.com/features/how-to-wash-hands-with-soap-and-prevent-coronavirus-188729.html