ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ಫೇಸ್‌ಬುಕ್ ಸಂಸ್ಥೆ 43,574 ಕೋಟಿ ರೂ ಹೂಡಿಕೆ ಮಾಡುವ ಉದ್ದೇಶದ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (“ರಿಲಯನ್ಸ್ ಇಂಡಸ್ಟ್ರೀಸ್”), ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ (“ಜಿಯೋ ಪ್ಲಾಟ್‌ಫಾರ್ಮ್ಸ್”) ಹಾಗೂ ಫೇಸ್‌ಬುಕ್, ಇಂಕ್. (“ಫೇಸ್‌ಬುಕ್”) ಘೋಷಿಸಿವೆ. ಈ ಹೂಡಿಕೆಯು ಜಿಯೋ ಪ್ಲಾಟ್‌ಫಾರ್ಮ್ಸ್ ಅನ್ನು ರೂ. 4.62 ಲಕ್ಷ ಕೋಟಿ ಪ್ರಿ-ಮನಿ ಎಂಟರ್‌ಪ್ರೈಸ್ ಮೌಲ್ಯಕ್ಕೆ ತಲುಪಿಸಿದೆ (ಒಂದು ಡಾಲರಿಗೆ ರೂ. 70ರ ವಿನಿಮಯ ದರದಲ್ಲಿ 65.95 ಶತಕೋಟಿ ಡಾಲರುಗಳು).
ಫೇಸ್‌ಬುಕ್ ಹೂಡಿಕೆಯು ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ 9.99% ಈಕ್ವಿಟಿ ಪಾಲುದಾರಿಕೆಗೆ ಸಮಾನವಾಗಿರಲಿದೆ (ಫುಲ್ಲಿ ಡೈಲ್ಯೂಟೆಡ್ ಬೇಸಿಸ್‌ನಲ್ಲಿ). ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಜಿಯೋ ಪ್ಲಾಟ್‌ಫಾರ್ಮ್ಸ್, ಜಿಯೋದ ಮುಂಚೂಣಿ ಡಿಜಿಟಲ್ ಆಪ್‌ಗಳು, ಡಿಜಿಟಲ್ ಇಕೋಸಿಸ್ಟಂಗಳು ಹಾಗೂ ಭಾರತದ ನಂ.1 ಅತಿವೇಗದ ಸಂಪರ್ಕ ವೇದಿಕೆಯನ್ನು ಒಂದೇ ಛಾವಣಿಯಡಿ ತರುವ ಮೂಲಕ ಭಾರತಕ್ಕಾಗಿ ಡಿಜಿಟಲ್ ಸಮಾಜವನ್ನು ರೂಪಿಸುತ್ತಿರುವ ಮುಂದಿನ ಪೀಳಿಗೆಯ ತಂತ್ರಜ್ಞಾನ ಸಂಸ್ಥೆಯಾಗಿದೆ
Read more at: https://kannada.oneindia.com/news/business/facebook-invest-in-jio-platforms-small-kirana-stores-goes-online-190153.html