ಈಶಾನ್ಯ ದೆಹಲಿ ಪ್ರದೇಶವೊಂದನ್ನು ಬಿಟ್ಟು, ದೇಶದೆಲ್ಲೆಡೆ 10ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಗೃಹಸಚಿವಾಲಯ(MHRD) ಆದೇಶವನ್ನು ಹೊರಡಿಸಿದೆ. ಈ ಆದೇಶ ಸಿಬಿಎಸ್ ಇಯ ಎಲ್ಲಾ ವಿದ್ಯಾಸಂಸ್ಥೆಗಳಿಗೆ ಅನ್ವಯವಾಗಲಿದೆ.
ಸೆಂಟ್ರಲ್ ಬೋರ್ಡ್ ಆಫ್ ಸೆಕಂಡರಿ ಎಜುಕೇಷನ್ (ಸಿಬಿಎಸ್ ಇ) ಕೂಡಾ ಈ ಮುಂಚೆ ನೀಡಿದ ಪ್ರಕಟಣೆಯಂತೆ ಕ್ಲಾಸ್ 12 ಪರೀಕ್ಷೆ ನಡೆಸುವ ಬಗ್ಗೆ ಮಾತ್ರ ಚಿಂತನೆ ನಡೆಸಲಾಗಿದೆ ಎಂದು ತಿಳಿಸಲಾಗಿತ್ತು. ವಿದೇಶದಲ್ಲಿರುವ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲು ನೋಂದಣಿಸಿದ್ದರು. ಈ ವಿದ್ಯಾರ್ಥಿಗಳಿಗೂ ಈ ಆದೇಶ ಅನ್ವಯವಾಗಲಿದೆ. ಕೊರೊನಾವೈರಸ್ ಸೋಂಕು ಹರಡದಂತೆ ಲಾಕ್ಡೌನ್ ಆರಂಭವಾಗುತ್ತಿದ್ದಂತೆ ಮಾರ್ಚ್ ತಿಂಗಳಿನಲ್ಲಿ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಸಿಬಿಎಸ್ಇ ಮುಂದೂಡಿತ್ತು.