ಕೊರೊನಾವೈರಸ್ ವಿರುದ್ಧ ಹೋರಾಟಕ್ಕೆ ಅಗತ್ಯವಾದ ಧನ ಸಹಾಯವನ್ನು ದೇಶದ ಎಲ್ಲೆಡೆಯಿಂದ ಪಡೆಯಲಾಗುತ್ತಿದೆ. ಸಂಸದರ ಸಂಬಳದಲ್ಲಿ ಶೇ 30ರಷ್ಟು ಕಡಿತಗೊಳಿಸಲಾಗಿದೆ. ಆದರೆ, ಸರ್ಕಾರದ ಈ ಆದೇಶದ ಬೆನ್ನಲ್ಲೇ ಕೇಂದ್ರ ಸರ್ಕಾರಿ ನೌಕರರ ಪಿಂಚಣಿ ಮೊತ್ತ ಕೂಡಾ ಇದೇ ಪ್ರಮಾಣದಲ್ಲಿ ಪಡೆಯಲಾಗುತ್ತದೆ ಎಂಬ ಆದೇಶವೊಂದು ಬಂದಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು.
ಕೇಂದ್ರ ಸರ್ಕಾರಿ ನೌಕರರ ಪಿಂಚಣಿಯನ್ನು ಶೇ 30 ರಷ್ಟು ಕಡಿತಗೊಳಿಸಲಾಗುತ್ತದೆ ಎಂಬ ಸುದ್ದಿ ಲಾಕ್ ಡೌನ್ ಶುರುವಾದಾಗಿನಿಂದಲೂ ಈ ರೀತಿ ಸುಳ್ಳು ಸುದ್ದಿಯೊಂದನ್ನು ಹಬ್ಬಿಸಲಾಗಿದೆ. 21 ದಿನಗಳ ಲಾಕ್ ಡೌನ್ ಏಪ್ರಿಲ್ 14ರಂದು ಮುಕ್ತಾಯವಾಗಲಿದೆ.
ಕೇಂದ್ರ ಸರ್ಕಾರಿ ನೌಕರರ ಸಂಬಳದಲ್ಲಿ ಕೂಡಾ ಕಡಿತ ಮಾಡಲಾಗುತ್ತದೆ ಎಂಬ ಸುದ್ದಿಯೂ ಸುಳ್ಳು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ರೀತಿ ಯಾವುದೇ ಆದೇಶವನ್ನು ಸರ್ಕಾರ ಹೊರಡಿಸಿಲ್ಲ, ಸರ್ಕಾರಿ ನೌಕರರ ಸಂಬಳ ಹಾಗೂ ಪಿಂಚಣಿ ಮೊತ್ತ ಎಂದಿನಂತೆ ಸಿಗಲಿದೆ ಎಂದು ಸ್ಪಷ್ಟನೆ ನೀಡಲಾಗಿದೆ.
Read more at: https://kannada.oneindia.com/news/india/fake-government-is-not-reducing-pension-of-central-government-employees-189231.html