ಕೊರೊನಾವೈರಸ್ ವಿರುದ್ಧ ನಿರ್ಣಾಯಕ ಹೋರಾಟದಲ್ಲಿ ಸಾರ್ವಜನಿಕರ ಸಹಕಾರವನ್ನು ಮತ್ತೊಮ್ಮೆ ಕೇಂದ್ರ ಸರ್ಕಾರವು ಬಯಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಲಾಕ್ಡೌನ್ ವಿಸ್ತರಣೆ ಮಾಡಿ ಮಾತನಾಡುತ್ತಾ, ಆರೋಗ್ಯ ಸೇತು ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಂಡು ಬಳಕೆ ಮಾಡಿ, ಇತರರಿಗೂ ತಿಳಿಸಿ ಎಂದು ಟಾಸ್ಕ್ ನೀಡಿದ್ದಾರೆ.
ಈ ಆಪ್ ಮೂಲಕ ಕೊವಿಡ್19 ಪಾಸಿಟಿವ್ ರೋಗಿಗಳ ಚಲನವಲನಗಳನ್ನು ರಿಯಲ್ ಟೈಮಲ್ಲಿ ಟ್ರ್ಯಾಕ್ ಮಾಡಬಹುದು. ಕೊರೊನಾ ಸೋಂಕಿತರು, ಹೋಂ ಕ್ವಾರಂಟೈನ್ ಆಗಿರುವವರು ಎಲ್ಲೆಲ್ಲಿದ್ದಾರೆ ಎಂದು ಗುರುತಿಸಬಹುದು. ಒಂದು ವೇಳೆ ಸೋಂಕಿತ ವ್ಯಕ್ತಿಯೇನಾದರೂ ಆರೋಗ್ಯವಂತರ ಬಳಿಗೆ(1 ಮೀಟರ್ ಅಂತರ) ಸುಳಿದರೆ ಅಲರ್ಟ್ ನೀಡಲಿದೆ. ಗೂಗಲ್ ಪ್ಲೇಸ್ಟೋರಿನಲ್ಲಿ NIC eGov Mobile AppsTools ಅಭಿವೃದ್ಧಿಪಡಿಸಿರುವ Aarogya Setu ಆಪ್ ಮಾತ್ರ ಡೌನ್ಲೋಡ್ ಮಾಡಿಕೊಳ್ಳಿ. 11 ಭಾಷೆಗಳಲ್ಲಿ ಈ ಆಪ್ ಲಭ್ಯವಿದೆ. ಆಂಡ್ರಾಯ್ಡ್ ಫೋನ್ ಬಳಕೆದಾರರು ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್: ಗೂಗಲ್ ಪ್ಲೇಸ್ಟೋರ್ ಲಿಂಕ್ ಕ್ಲಿಕ್ ಮಾಡಿ