ಕೊರೊನಾವೈರಸ್ ಭೀತಿಯಿಂದ ಬದುಕು ಉಳಿಸಿಕೊಳ್ಳಲು ಜನ ಹೆಣಗುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬುಡಮೇಲಾಗುತ್ತಿರುವುದು ಗೋಚರವಾಗುತ್ತಿದೆ. ಈಗಾಗಲೇ ಪರಿಣಿತರು, ಕೊರೊನಾ ನಂತರದ ಬದುಕು ಮೊದಲಿನ ಸ್ಥಿತಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ. ಹಾಗಂತ ದೊಡ್ಡ ಮಟ್ಟದ ಬದಲಾವಣೆ ನಿರೀಕ್ಷೆಯೂ ಕಷ್ಟ ಎನ್ನುತ್ತಿದ್ದಾರೆ. ಈ ಕುರಿತು ಇನ್ನಷ್ಟು ಆಳವಾದ ಒಳನೋಟಗಳು ಈ ಕಾಲದ ಅಗತ್ಯ. ‘ಒನ್ಇಂಡಿಯಾ ಕನ್ನಡ’ #LifeAfterCorona,
#ಕೊರೊನಾನಂತರದಬದುಕು ಹ್ಯಾಶ್‌ಟ್ಯಾಗ್ ಅಡಿಯಲ್ಲಿ ತಜ್ಞರು, ಆಲೋಚನೆ ಮಾಡುವವರಿಂದ ಕೊರೊನಾ ನಂತರದ ಬದುಕು ಹೇಗಿಬಹುದು? ಎಂಬ ಪ್ರಶ್ನೆಗೆ ಅಭಿಪ್ರಾಯ ಸಂಗ್ರಹ ಅಭಿಯಾನ ಆರಂಭಿಸಿದೆ. ಈ ಸರಣಿಯಲ್ಲಿ ಮೊದಲ ಲೇಖನವಾಗಿ ಹಿರಿಯ ಪತ್ರಕರ್ತ ಸತೀಶ್ ಚಪ್ಪರಿಕೆ ಅವರ ಪ್ರತಿಕ್ರಿಯೆಯನ್ನು ಇಲ್ಲಿ ಪ್ರಸ್ತುತಪಡಿಸಲಾಗಿದೆ.
ಕೊರೊನಾ ಸುತ್ತ ಸುಳ್ಳು ಸುದ್ದಿಗಳು, ಅಸಹ್ಯಕರ ರೀತಿಯಲ್ಲಿ ಮಾಹಿತಿ ಹಂಚಿಕೆಯಿಂದಾಗಿ ಗೋಜಲಾಗಿರುವ ಸನ್ನಿವೇಶದಲ್ಲಿ ಸಮುದಾಯಕ್ಕೆ ಮುನ್ನೋಟಗಳು ಬೇಕಿವೆ. ದೂರದೃಷ್ಟಿಯಿಂದ ಕೂಡಿರುವ ಸಲಹೆ, ಸೂಚನೆಗಳು ಜನರಲ್ಲಿ ಆತ್ಮವಿಶ್ವಾಸ ತುಂಬಬಹುದು, ಅತ್ಯಂತ ಕೆಟ್ಟ ಸನ್ನಿವೇಶವನ್ನು ಎದುರಿಸಲು ಜನರನ್ನು ಸಜ್ಜುಗೊಳಿಸಬಹುದು. ಸತೀಶ್ ಚಪ್ಪರಿಕೆ ಅವರ ಅಭಿಪ್ರಾಯ ಮುಂದೆ ಓದಿ..
Read more at: https://kannada.oneindia.com/life-after-corona/opinion-journalist-satish-chapparike-insights-how-to-fight-corona-189520.html