ಒನ್ಇಂಡಿಯಾ ಕನ್ನಡ’ #LifeAfterCorona, #ಕೊರೊನಾನಂತರದಬದುಕು ಹ್ಯಾಶ್‌ಟ್ಯಾಗ್ ಅಡಿಯಲ್ಲಿ ತಜ್ಞರು, ಆಲೋಚನೆ ಮಾಡುವವರಿಂದ ಕೊರೊನಾ ನಂತರದ ಬದುಕು ಹೇಗಿರಬಹುದು? ಎಂಬ ಪ್ರಶ್ನೆಗೆ ಅಭಿಪ್ರಾಯ ಸಂಗ್ರಹ ಅಭಿಯಾನ ಆರಂಭಿಸಿದೆ.
ಕೊರೊನಾವೈರಸ್ ಭೀತಿಯಿಂದ ಬದುಕು ಉಳಿಸಿಕೊಳ್ಳಲು ಜನ ಹೆಣಗುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬುಡಮೇಲಾಗುತ್ತಿರುವುದು ಗೋಚರವಾಗುತ್ತಿದೆ. ಈಗಾಗಲೇ ಪರಿಣಿತರು, ಕೊರೊನಾ ನಂತರದ ಬದುಕು ಮೊದಲಿನ ಸ್ಥಿತಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ. ಹಾಗಂತ ದೊಡ್ಡ ಮಟ್ಟದ ಬದಲಾವಣೆ ನಿರೀಕ್ಷೆಯೂ ಕಷ್ಟ ಎನ್ನುತ್ತಿದ್ದಾರೆ. ಈ ಕುರಿತು ಇನ್ನಷ್ಟು ಆಳವಾದ ಒಳನೋಟಗಳು ಈ ಕಾಲದ ಅಗತ್ಯ. ಈ ನಿಟ್ಟಿನಲ್ಲಿ ಸಿಡ್ನಿಯಲ್ಲಿ ನೆಲೆಸಿರುವ ದಾವಣಗೆರೆ ಮೂಲದ ಸಾಫ್ಟ್ ವೇರ್ ತಂತ್ರಜ್ಞ ಶ್ರೀಹರ್ಷ ಸಾಲಿಮಠ ಅವರು ತಮ್ಮ ಅಭಿಪ್ರಾಯವನ್ನು ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.