ದೇಶದ ಹಿತದೃಷ್ಟಿಯಿಂದ ಲಾಕ್ಡೌನ್ ಮುಂದುವರೆಸುವ ಅಗತ್ಯವಿದೆ. ಕೊರೊನಾ ಸೋಂಕು ಹರಡದಂತೆ ನಾವು ಆಯ್ಕೆ ಮಾಡಿಕೊಂಡಿರುವ ಮಾರ್ಗ ಸರಿಯಾಗಿದೆ. ಆರ್ಥಿಕ ಪರಿಸ್ಥಿತಿಯಿಂದ ದೇಶದ ಜನರ ಪ್ರಾಣ ಮುಖ್ಯ ಎಂದು ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಹೇಳಿದರು. ಇದೇ ಸಂದರ್ಭದಲ್ಲಿ ಎರಡನೇ ಅವಧಿಗೆ ಲಾಕ್ಡೌನ್ ವಿಸ್ತರಣೆ ಘೋಷಣೆ ಮಾಡಿದರು.
ಮಾರ್ಚ್ 23ರಿಂದ ಏಪ್ರಿಲ್ 14ರ ತನಕ ಮೊದಲ ಅವಧಿಯಲ್ಲಿ 21 ದಿನಗಳ ಲಾಕ್ಡೌನ್ ಅವಧಿಯನ್ನು ದೇಶ ಎದುರಿಸಿದೆ. ಈಗ ಮೇ 3ರ ತನಕ 19 ದಿನಗಳ ಲಾಕ್ಡೌನ್ ವಿಸ್ತರಣೆಯಾಗಿದೆ. ಜೊತೆಗೆ ಏಪ್ರಿಲ್ 20ರ ತನಕ ರೆಡ್ ಅಲರ್ಟ್ ಇರುವ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ತೀವ್ರವಾಗಿ ಅವಲೋಕನಕ್ಕೆ ಕರೆ ನೀಡಲಾಗಿದೆ. ಪರಿಸ್ಥಿತಿ ಸುಧಾರಿಸಿದರೆ ಮಾತ್ರ ಹೊಸ ಮಾರ್ಗಸೂಚಿಯ ಅನ್ವಯ ವಿನಾಯಿತಿ ನೀಡಲಾಗುತ್ತದೆ ಎಂದು ಮೋದಿ ಎಚ್ಚರಿಸಿದರು.
ಮೇ3 ರ ತನಕ ಈ ಏಳು ನಿಯಮಗಳನ್ನು ಪಾಲಿಸಿ, ರಾಷ್ಟ್ರವನ್ನು ಜಾಗೃತವಾಗಿರಿ.
Read more at: https://kannada.oneindia.com/news/india/pm-modi-seeks-saat-baaton-mein-saath-support-in-7-things-189427.html