ಕೊರನಾವೈರಸ್ ಸೋಂಕು ಹರಡದಂತೆ ಲಾಕ್ ಡೌನ್ ಮಾಡಿರುವುದರಿಂದ ಅತಿ ಸಣ್ಣ, ಸಣ್ಣ, ಮಧ್ಯಮ ಉದ್ದಿಮೆ(ಎಂಎಸ್ಎಂಇ) ಕ್ಷೇತ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಈ ವಲಯದ ನೌಕರರ ಕನಿಷ್ಠ ಸಂಬಳ ನಿಗದಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯ ಕೈಗಾರಿಕೆ ವಾಣಿಜ್ಯ ಮಹಾ ಸಂಸ್ಥೆ (ಎಫ್ ಕೆ ಸಿ ಸಿ ಐ) ಪತ್ರ ಬರೆದಿದೆ.
ರಾಜ್ಯದಲ್ಲಿ 6.5 ಲಕ್ಷ ಕೈಗಾರಿಕೆಗಳಿದ್ದು 65 ಲಕ್ಷ ಮಂದಿ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ತಿಂಗಳಿಗೆ 6500 ಕೋಟಿ ರೂಪಾಯಿ ವೇತನ ಪಾವತಿ ಮಾಡಲಾಗುತ್ತಿದೆ. MSMEs ವಲಯದಲ್ಲಿ ದೇಶದಲ್ಲಿ 11 ಕೋಟಿ ಮಂದಿ ಕಾರ್ಯ ನಿರ್ವಹಿಸುತ್ತಿದ್ದು, ದೇಶದ ಜಿಡಿಪಿಗೆ ಶೇ 30 ರಷ್ಟು ಕೊಡುಗೆ ನೀಡುತ್ತಿದೆ
ಲಾಕ್ ಡೌನ್ ಸಂದರ್ಭದಲ್ಲಿ ಉತ್ಪಾದನೆ ಇಲ್ಲದೆ ಉದ್ದಿಮೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೂರ್ತಿ ವೇತನ ಪಾವತಿ ಮಾಡಲಾಗದೆ ಸಮಸ್ಯೆಗೆ ಸಿಲುಕಿದ್ದಾರೆ. ಬಹಳಷ್ಟು ಮಂದಿ ಸ್ಪಷ್ಟೀಕರಣ ನೀಡುವಂತೆ ಮನವಿ ಮಾಡಲಾಗಿದೆ ಎಂದು ಎಫ್ ಕೆ ಸಿ ಸಿ ಅಧ್ಯಕ್ಷ ಸಿ.ಆರ್.ಜನಾರ್ದನ್ ಹೇಳಿದರು
Read more at: https://kannada.oneindia.com/news/business/lock-down-fkcci-on-msmes-minimum-wages-to-be-paid-189400.html