ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗುವ ಕಾಮನ್ ಎಂಟರೆನ್ಸ್ ಟೆಸ್ಟ್(ಸಿಇಟಿ) 2020 ದಿನಾಂಕ ನಿಗದಿಯಾಗಿದೆ. ಜುಲೈ 30 ಮತ್ತು ಜುಲೈ 31ಕ್ಕೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಂಗಳವಾರದಂದು ಪ್ರಕಟಿಸಿದೆ. ಕೊರೊನಾವೈರಸ್ ಸೋಂಕು ಹರಡದಂತೆ ವಿಧಿಸಲಾದ ಲಾಕ್ ಡೌನ್ ನಿಂದಾಗಿ ಸಿಇಟಿ ಮುಂದೂಡಲಾಗಿತ್ತು.ಜುಲೈ 30ರಂದು ನಿಗದಿಯಾಗಿರುವ ಪರೀಕ್ಷೆಗೆ ಸಕಲ ಸಿದ್ಧತೆ ನಡೆಸಲಾಗಿದ್ದು, ರಾಜ್ಯದಲ್ಲಿ ಒಟ್ಟು 75 ಸ್ಥಳಗಳನ್ನು ಹೊಸ ಪರೀಕ್ಷಾ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ತಾಣದಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದು.
ವಿದ್ಯಾರ್ಥಿಗಳು ತಾವು ಮೊದಲು ನಿಗದಿಪಡಿಸಿಕೊಂಡ ಪರೀಕ್ಷಾ ಕೇಂದ್ರವನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಮೊದಲ ವರ್ಷ/ಸೆಮಿಸ್ಟರ್ ಇಂಜಿನಿಯರ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ ಕೋರ್ಸ್, ಬಿ ಫಾರ್ಮಾ, ಫಾರ್ಮಾ ಡಿ ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ ನಡೆಸಲಾಗುತ್ತದೆ.
Read more at: https://kannada.oneindia.com/news/karnataka/karnataka-cet-2020-dates-time-table-announced-192390.html