ಕೊರೊನಾ ವೈರಸ್ ಆತಂಕದಿಂದಾಗಿ ವಾರಗಳ ಕಾಲ ಡೊನಾಲ್ಡ್ ಟ್ರಂಪ್ ಈ ಮಾತ್ರೆಗಳನ್ನು ಸೇವಿಸಿದ್ದೆ ಎಂದು ಕೆಲ ವಾರಗಳ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದು ಭಾರಿ ಸುದ್ದಿಯಾಗಿತ್ತು. ಯಾರು ಏನೇ ಹೇಳಲಿ, ತಮ್ಮ ನಂಬಿಕೆಗೆ ಬದ್ಧವಾಗಿ ಔಷಧಿ ಸೇವಿಸುತ್ತಿದ್ದ ಟ್ರಂಪ್, ಇದೀಗ ಎಚ್ ಸಿ ಕ್ಯೂ ಮಾತ್ರೆ ಸೇವಿಸುವುದನ್ನು ನಿಲ್ಲಿಸಿದ್ದೇನೆ ಎಂದಿದ್ದಾರೆ. ”ಕೊವಿಡ್-19 ವಿರುದ್ಧ ಮಲೆರಿಯಾ ನಿರೋಧಕ ಔಷಧ ಹೈಡ್ರಾಕ್ಸಿಕ್ಲೋರೊಕ್ವಿನ್ ಯಾವುದೇ ಕೆಲಸ ಮಾಡುವುದಿಲ್ಲ” ಎಂದು ಅಮೆರಿಕ ಸರ್ಕಾರದ ಸಂಶೋಧಕರೇ ಹೇಳಿದ್ದರು ಕೂಡ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದೆ ಎಂದು ಟ್ರಂಪ್ ಹೇಳಿದ್ದರು.
ಹೈಡ್ರಾಕ್ಸಿಕ್ಲೋರೊಕ್ವಿನ್ ಮಾತ್ರೆಯ ಬಳಕೆಗೆ ಉತ್ತೇಜನ ನೀಡಲು ಟ್ರಂಪ್ ಆಸಕ್ತಿ ಹೊಂದಿದ್ದು ಗುಟ್ಟಾದ ವಿಷಯವೇನಲ್ಲ. ಮಲೇರಿಯಾ ರೋಗಿಗಳಿಗೆ ಪ್ಲೇಕ್ವೆನಿಲ್ ಹೆಸರಿನಲ್ಲಿ ನೀಡಲಾಗುವ ಹೈಡ್ರೋಕ್ಸಿಕ್ಲೋರೊಕ್ವೆನ್(HCQ) ಎಂಬ Anti-Malaria ಔಷಧದ ಬಗ್ಗೆ ಟ್ರಂಪ್ ಅವರು ಮಾರ್ಚ್ ತಿಂಗಳಲ್ಲೇ ತಮ್ಮ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದರು. HCQ ಹಾಗೂ ಅಜಿಥ್ರೋಮೈಸಿನ್ ಬಳಕೆಯಿಂದ ವೈದ್ಯಕೀಯ ಲೋಕದಲ್ಲಿ ಭಾರಿ ಬದಲಾವಣೆ ಸಾಧ್ಯ ಎಂದಿದ್ದರು
ಪ್ಲೇಕ್ವೆನಿಲ್ ಬ್ರ್ಯಾಂಡ್ ಹೆಸರಿನಲ್ಲಿ ನೀಡಲಾಗುವ ಹೈಡ್ರೋಕ್ಸಿಕ್ಲೋರೊಕ್ವೆನ್(HCQ) ಮಲೇರಿಯಾ ಅಲ್ಲದೆ ರುಮಾಟಾಯಿಡ್ ಆರ್ಥೈಟಿಸ್ ಗೂ ಬಳಸಲಾಗುತ್ತದೆ. ಹೃದಯ, ಶ್ವಾಸಕೋಶ, ಜ್ವರ, ಮೈಕೈ ನೋವು, ಸ್ನಾಯು ಸೆಳೆತ ಎಲ್ಲಕ್ಕೂ ಈ ಔಷಧಿ ಬಳಸಬಹುದು ಎಂದು ಜಾನ್ಸ್ ಹಾಪ್ಕಿನ್ ವಿಶ್ವ ವಿದ್ಯಾಲಯ ವರದಿ ನೀಡಿದೆ.
Read more at: https://kannada.oneindia.com/news/washington/trump-says-he-s-no-longer-taking-hydroxychloroquine-192874.html